Breaking News

ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಕುಸ್ತಿಪಟು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Spread the love

ಧಾರವಾಡ(ಹುಬ್ಬಳ್ಳಿ): ಹೃದಯಾಘಾತದಿಂದ ಯುವ ಕುಸ್ತಿಪಟು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ವಾಕಿಂಗ್ ಮಾಡಿ ಮನೆಗೆ ವಾಪಸ್ ತೆರಳುತ್ತಿದ್ದಾಗ ಹೃದಯಾಘಾತವಾಗಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಪೈಲ್ವಾನ್ ಸಂಗಪ್ಪ ಬಳಿಗೇರ್ (28) ಮೃತ ಕುಸ್ತಿಪಟು.

ಮೂಲತಃ ಬೆಳಗಾವಿ ಜಿಲ್ಲೆಯವರಾದರೂ ಧಾರವಾಡದಲ್ಲಿ ನೆಲೆಸಿದ್ದರು. ಇಂದು ಬೆಳಗಿನ ಜಾವ ಧಾರವಾಡದ ಮದಿಹಾಳದ ಬಳಿ ಸ್ನೇಹಿತನ ಜೊತೆಗೆ ವಾಕಿಂಗ್​ಗೆ ತೆರಳಿ ಮನೆಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಹೃದಯಾಘಾತವಾಗುತ್ತಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಸಂಗಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತನ ಅಂತ್ಯಕ್ರಿಯೆ ದೊಡವಾಡ ಗ್ರಾಮದಲ್ಲಿ ನಡೆಯಲಿದೆ ಎಂದು ಮೃತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ