Breaking News

ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ರಾಜ್ಯ ಶೀಘ್ರ ಸೇರ್ಪಡೆ

Spread the love

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಮುಂದಿನ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಹೇಳಿದರು.

 

ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು. ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು ಸ್ಥಳಗಳು ಕರ್ನಾಟಕದಲ್ಲಿವೆ.

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವಿನೂತನ ಹೆಜ್ಜೆ ಇಟ್ಟಿದ್ದು, ಪ್ರವಾಸಿಗರಿಗಾಗಿ ನೂತನ ಕ್ಯಾರಾವ್ಯಾನ್‌ ವಾಹನ ಪರಿಚಯಿಸಿದೆ ಎಂದರು.

ಸಚಿವ ಆನಂದ್‌ ಸಿಂಗ್‌ ಅವರು ಬಂದ ನಂತರ ಹಲವಾರು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಯಾಣ, ಚಿಕ್ಕಮಗಳೂರಿನಲ್ಲಿ ರೋಪ್‌ ವೇ, ಹೋಟೇಲುಗಳನ್ನು ಪುನಶ್ಚೇತನ ಮಾಡುವ ಕೆಲಸ ಮಾಡುತ್ತಿದ್ದಾರೆ. ಎರಡು ಸರ್ಕಿಟ್‌ ಗಳನ್ನು ರೂಪಿಸಲಾಗಿದೆ. ಸಿಆರ್‌ ಝೆಡ್‌ ಸಾಧನೆ ಅದ್ಭುತವಾಗಿದೆ. ಅದರಲ್ಲಿ ಆನಂದ್‌ ಸಿಂಗ್‌ ಅವರ ಪಾತ್ರ ಮುಖ್ಯವಾಗಿದೆ ಎಂದು ಶ್ಲಾ ಸಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ