Breaking News

ಕಟೀಲ್ ಬಫೂನ್ ಇದ್ದಂತೆ: ಅವರ ಮೆದುಳು-ನಾಲಿಗೆಗೆ ಸಂಪರ್ಕವೇ ಇರಲ್ಲ; ಎಂ.ಬಿ.ಪಾಟೀಲ್

Spread the love

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಅವರು `ಬಫೂನ್’ ಇದ್ದಂತೆ. ಅವರಿಗೆ ನಾಲಿಗೆ ಮತ್ತು ಮದುಳಿಗೆ ಸಂಪರ್ಕವೇ ಇಲ್ಲದಿದ್ದು, ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಅವರು ವ್ಯಂಗ್ಯವಾಡಿದರು.

 

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ನಾಲಿಗೆ-ಮೆದುಳಿಗೆ ಸಂಪರ್ಕವಿಲ್ಲದಂತೆ ಮಾತನಾಡುತ್ತಾರೆ. ಅವರು ಒಂದು ರೀತಿ `ಬಫೂನ್’ ಇದ್ದಂತೆ. ಅವರ ಬಗ್ಗೆ ಚರ್ಚಿಸುವ ಅವಶ್ಯಕತೆಯೇ ಇಲ್ಲ ಎಂದು ಛೇಡಿಸಿದರು.

40% ಹಣೆಪಟ್ಟಿ ಹೊತ್ತಿರುವ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದಿಂದ ಸದ್ಯ ಯಾರೊಬ್ಬರೂ ಹೋಗುವ ಸ್ಥಿತಿಯಲ್ಲಿಲ್ಲ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 130, ಬಿಜೆಪಿ ಪಕ್ಷ 30 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಬಿಜೆಪಿಯವರ ಸರ್ವೆ ವರದಿಗಳೇ ತಿಳಿಸುತ್ತವೆ. ಹಾಗಾಗಿ ಕಾಂಗ್ರೆಸ್ ಪಕ್ಷದಿಂದ ಒಬ್ಬ ಶಾಸಕರು ಸಹ ಬಿಜೆಪಿ ಪಕ್ಷಕ್ಕೆ ಹೋಗಲ್ಲ


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ