Breaking News

ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಜೊಲ್ಲೆ

Spread the love

ಬೆಂಗಳೂರು: ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಹಿಂದೂ ಮಹಿಳೆಯರ ಸಮ್ಮುಖದಲ್ಲಿ ಸಾಮೂಹಿಕವಾಗಿ “ಕುಂಕುಮಾರ್ಚನೆ”ನಡೆಸಲು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾಜೊಲ್ಲೆ ಸೂಚನೆ ನೀಡಿದ್ದಾರೆ.

 

ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿದೆ. ಅದರಂತೆ ದಿನಾಂಕ 30.09.2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರಮಾಡಿಕೊಂಡು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆಯನ್ನು ಲೋಕ ಕಲ್ಯಾಣಕ್ಕಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್‌ 30 ರಂದು ಸಾಮೂಹಿಕ ಕುಂಕುಮಾರ್ಚನೆಯನ್ನು ನಡೆಸಲು ಕಾರಣಾಂತರಗಳಿಂದ ಸಾಧ್ಯವಾಗದಿದ್ದಲ್ಲಿ ದಿನಾಂಕ: 03.10.2022 ರ ಸೋಮವಾರ ದುರ್ಗಾಷ್ಠಮಿಯಂದು ಈ ಕಾರ್ಯಕ್ರಮವನ್ನು ನಡೆಸಬೇಕು ಹಾಗೂ ಈ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಾನ್ಯ ಸಚಿವರ ಸೂಚನೆಯಂತೆ ಇಂದು (ಸೆ. 28, 2022 ರಂದು) ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ