Breaking News

ಪಿಎಫ್ಐ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆ: ವಿಶೇಷ ತಂಡ ರಚಿಸಿ ಪೊಲೀಸರಿಂದ ತಲಾಶ್​

Spread the love

ಬೆಳಗಾವಿ: ಕಳೆದ ಮೂರು ದಿನಗಳಿಂದ ನಿಷೇಧಿತ ಪಿಎಫ್ಐನ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಕಳೆದ ಒಂದು ವಾರದ ಹಿಂದೆ ದೇಶಾದ್ಯಂತ ಪಿಎಫ್ಐ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಮುಂದಾಳತ್ವವನ್ನು ಬೆಳಗಾವಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ ಕಟಗಿ ವಹಿಸಿದ್ದರು.

ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡಿದ ಆರೋಪದ ಜೊತೆಗೆ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದ ಪಿಎಫ್ಐ, ಎಸ್​ಡಿಪಿಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಬೆಳಗಾವಿ ಪೊಲೀಸರು ಎರಡು ದಿನಗಳ ಹಿಂದೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದರು. ದಾಳಿ ವೇಳೆ ಬೆಳಗಾವಿ ನಗರದಲ್ಲಿ ಏಳು ಹಾಗೂ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಓರ್ವ ಸೇರಿ ಎಂಟು ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕುಳುಹಿಸಿದ್ದರು.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ