Breaking News

ದಸರಾ ಹಿನ್ನೆಲೆ KSRTCಯಿಂದ 2000 ಹೆಚ್ಚುವರಿ ಬಸ್ ಸೇವೆ

Spread the love

ಬೆಂಗಳೂರು: ಕೋವಿಡ್ ನಂತರ ಅದ್ಧೂರಿಯಾಗಿ ನಡೆಯುತ್ತಿರುವ ಮೈಸೂರು ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೊತೆಗೆ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಸಾರಿಗೆ ಬಸ್ ಸೇವೆಗಳನ್ನು ಒದಗಿಸಿದ್ದು, ಕಳೆಗುಂದಿರುವ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತಿದೆ

ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್‌ ಸಾರಿಗೆ ಸೇವೆಗಳು ಸೇರಿದಂತೆ ದಸರಾ ರಜೆಗಳ ಪಯುಕ್ತ ಕೆಎಸ್​ಆರ್​ಟಿಸಿ ನಿಗಮದಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಕ್ಟೋಬರ್ 3 ರವರೆಗೂ ಈ ವಿಶೇಷ ಬಸ್​​ಗಳ ಸೇವೆ ಇರಲಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ