Breaking News

ಯುವಕನ ಮಿದುಳು ನಿಷ್ಕ್ರಿಯ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

Spread the love

ಅಥಣಿ: ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆ, ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಂಗಳವಾರ ಪ್ರಶಾಂತ ವಿಠ್ಠಲ ಮಲ್ಲೆವಾಡಿ ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಮರಳಿ ಬರುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು‌ ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ ತಲುಪಿದ್ದ ಆತ ಎಷ್ಟೇ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳಲಿಲ್ಲ. ಅಲ್ಲದೇ ಆತನ ಮಿದುಳು ಕೂಡ ನಿಷ್ಕ್ರಿಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ