Breaking News

ವಿಶ್ವ ಹಿರಿಯ ನಾಗರಿಕರ ದಿನಾಚರಣೆ,6 ಸಾಧಕರು, ಒಂದು ಸಂಸ್ಥೆಗೆ ಪ್ರಶಸ್ತಿ

Spread the love

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ 6 ಮಂದಿ ಹಿರಿಯ ನಾಗರಿಕರಿಗೆ ಮತ್ತು ಒಂದು ಸಂಸ್ಥೆಗೆ ಶನಿವಾರ (ಅ.1) ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌ ಅವರು, ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ, ಕ್ರೀಡೆ ಮತ್ತು ಕಾನೂನು ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ಸಾಧಕರಿಗೆ ಮತ್ತು ಒಂದು ಸಂಸ್ಥೆಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ಈ ಪ್ರಶಸ್ತಿಯು 1 ಲಕ್ಷ ರೂ. ಮತ್ತು ಸ್ಮರಣಿಕೆ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಎ. ನಾರಾಯಣ ಸ್ವಾಮಿ, ರಾಜೀವ್‌ ಚಂದ್ರಶೇಖರ್‌ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಶಸ್ತಿ ಪುರಸ್ಕೃತರು
ವಿರಾಜಪೇಟೆಯ ಎಂ.ಎಂ.ಬೋಪಯ್ಯ (ಶಿಕ್ಷಣ), ಹುಬ್ಬಳ್ಳಿಯ ಡಾ| ಬಿ.ಕೆ.ಬಸವರಾಜ ರಾಜಋಷಿ (ಸಾಹಿತ್ಯ), ವೆಂಕಪ್ಪ ಅಂಬಾಜಿ ಸುಗತೇಕರ (ಕಲಾ), ಕೊಪ್ಪಳದ ಡಾ| ಕೆ.ಜಿ.ಕುಲಕರ್ಣಿ (ಸಮಾಜಸೇವೆ), ಮೈಸೂರಿನ ವಿಜಯ ರಮೇಶ್‌ (ಕ್ರೀಡಾ), ಬೆಂಗಳೂರಿನ ಡಾ| ಕೋಡೂರು ವೆಂಕಟೇಶ್‌ (ಕಾನೂನು) ಹಾಗೂ ತೀರ್ಥಹಳ್ಳಿ ತಾಲೂಕು ಬಸವಾನಿಯ ಸಾವಿತ್ರಮ್ಮ ರಾಮಶರ್ಮ ಸೇವಾ ಟ್ರಸ್ಟ್‌.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ