Breaking News

ಅಥಣಿಯಲ್ಲಿ ಭಾರಿ ಮಳೆಗೆ ಕೊಚ್ಚಿಹೋದ ಸೇತುವೆ

Spread the love

ಅಥಣಿ(ಬೆಳಗಾವಿ): ಕಳೆದ ಎರಡು ದಿನದ ಹಿಂದೆ ಸುರಿದ ಧಾರಾಕಾರ ಮಳೆಗೆ ತೇಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು, ಶಾಲೆ ಮಕ್ಕಳು ಜೀವ ಪಣಕ್ಕಿಟ್ಟು ಹಳ್ಳ ದಾಟುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ- ಬಿಜ್ಜರಗಿ ರಸ್ತೆಯ ಡೋಣಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ತೋಟದ ಕೆಲಸಕ್ಕೆ ಹೋದ ರೈತರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವ ದುಸ್ಥಿತಿ ಬಂದೊದಗಿದೆ.

ಹಗ್ಗ ಹಿಡಿದು ಹಳ್ಳ ದಾಟಿದ ಶಾಲೆ ಮಕ್ಕಳು, ರೈತರು

ಶಾಸಕ ಮಹೇಶ ಕುಮಟಳ್ಳಿ ಅವರ ಹುಟ್ಟೂರಾದ ತೇಲಸಂಗ ಗ್ರಾಮದಲ್ಲಿ ಕಳೆದ ವರ್ಷ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವಂತಾಗಿದ್ದು, ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮ ಪಂಚಾಯಿತಿ ವತಿಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ