Breaking News

ಬೆಳಗಾವಿಯ ಮಾಡಂಗೇರಿ ಗ್ರಾಮದಲ್ಲಿ ಮನೆಗೋಡೆ ಕುಸಿದು ತಾಯಿ ಮಗು ಸ್ಥಳದಲ್ಲೇ ಸಾವು

Spread the love

ಬೆಳಗಾವಿ : ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಂಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಯಲ್ಲವ್ವ ಮಹಾದೇವ ಬಾಗಿಲದ (40), ಪ್ರಜ್ಬಲ್ ಮಹಾದೇವ ಬಾಗಿಲದ (5) ಎಂದು ಗುರುತಿಸಲಾಗಿದೆ. ಮನೆಯಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಮೂರು ದಿನಗಳಿಂದ ಯರಗಟ್ಟಿ ತಾಲೂಕಿನಾದ್ಯಂತ ನಿರಂತರ ಮಳೆ ಆಗುತ್ತಿದ್ದು,ಇದರಿಂದ ಶಿಥಿಲಾವಸ್ಥೆಯಲ್ಲಿದ್ದ ಮಾಡಂಗೇರಿ ಗ್ರಾಮದ ಮಹಾದೇವ ಲಕ್ಷ್ಮಪ್ಪ ಬಾಗಿಲದ ಎಂಬುವವರಿಗೆ ಸೇರಿದ ಮನೆ ಗೋಡೆ ಕುಸಿದು ಬಿದ್ದಿದೆ. ಈ ಸಂದರ್ಭ ಅಲ್ಲೇ ಇದ್ದ ತಾಯಿ ಮತ್ತು ಮಗು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದರು.

ಸ್ಥಳಕ್ಕೆ ಯರಗಟ್ಟಿ ತಹಶೀಲ್ದಾರ್ ಮಹಾಂತೇಶ, ಮುರಗೋಡ ಸಿಪಿಐ ಮೌನೇಶ್ವರ ಮಾಲಿ ಪಾಟೀಲ, ಪಿಎಸ್ಐ ಬಸನಗೌಡ ನಿರ್ಲಿ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆಗೆ ಇದುವರೆಗೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ