Breaking News

ಹೌಸಿಂಗ್ ಸೊಸೈಟಿ ಹೆಸರಿನಲ್ಲಿ ವಂಚನೆ: ನಿರ್ದೇಶಕ ಅರೆಸ್ಟ್, ಮಾಜಿ ಅಧ್ಯಕ್ಷ ಎಸ್ಕೇಪ್

Spread the love

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಭೂಮಿ ಕಬಳಿಸಲು ಕಿಡಿಗೇಡಿಗಳು ಇಲ್ಲದ ದಾಖಲೆಗಳನ್ನು ಸೃಷ್ಟಿ ಮಾಡಿ ಮೋಸ ಮಾಡುತ್ತಿರುವ ಹಲವು ಪ್ರಕರಣಗಳು ಕಂಡುಬಂದಿವೆ. ಅದೇ ರೀತಿಯಲ್ಲಿ ಬೋಗಸ್ ಹೌಸಿಂಗ್ ಸೊಸೈಟಿ ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಂಸ್ಥೆಯ ನಿರ್ದೇಶಕ ಹಾಗೂ ಸಿಇಒ ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇತ್ತೀಚೆಗೆ ವಂಚನೆ ಪ್ರಕರಣವೊಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು.ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹೌಸಿಂಗ್ ಸೊಸೈಟಿಯ ಹಾಲಿ ನಿರ್ದೇಶಕ ಕಂ ಸಿಇಒ ಪ್ರತಾಪ್ ಚಂದ್ ರಾಥೋಡ್ ಎಂಬವನನ್ನು ಬಂಧಿಸಿದ್ದಾರೆ. ಶೇಷಾದ್ರಿಪುರಂ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿರುವ ನ್ಯಾಷನಲ್ ಟೆಕ್ನಿಕಲ್ ಇನ್ಸ್ಟಿಟ್ಯೂಷನ್ ನ ಹೌಸಿಂಗ್ ಸೊಸೈಟಿಯಲ್ಲಿ ಹಾಲಿ ನಿರ್ದೇಶಕನಾಗಿ ಹಾಗೂ ಸಿಇಒ ಆಗಿ ಕೆಲಸ ಮಾಡುತ್ತಿದ್ದ ಎಂದು ಪ್ರಕರಣದ ಕುರಿತು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ದೂರುಗಳು : ಎನ್​​​​ಟಿಐನಿಂದ ಕೊಡಿಗೇಹಳ್ಳಿ ಬಳಿ ನಿರ್ಮಿಸಿರುವ ಲೇಔಟ್ ನಲ್ಲಿ ಬಿಡಿಎ ಅನುಮೋದಿತ ನಕ್ಷೆಯಲ್ಲಿರುವ ನಿವೇಶನಗಳನ್ನು ಮಾರಾಟ ಮಾಡಲು ಎನ್.ಟಿ.ಐ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಅನುಮತಿ ನೀಡಿತ್ತು. ಆದರೆ, ಬಿಡಿಎ ನಕ್ಷೆಯಲ್ಲಿ ಅನುಮೋದನೆ ಪಡೆಯದೇ ಇರುವ ಸೈಟ್ ಗಳನ್ನು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ ಮತ್ತು ಈ ಸಂಬಂಧ ಆರೋಪಿಗಳ ವಿರುದ್ಧ ಹಲವು ದೂರುಗಳು ಬಂದಿವೆ ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ