Breaking News

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ: ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಈ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ.

ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ ಎಂದು ಹೇಳಿದರು.

ಮೂಡಲಗಿಯಲ್ಲಿ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ತಹಶೀಲ್ದಾರ ಕಛೇರಿ ಹತ್ತಿರ ಮೂರು ಕೊಠಡಿಗಳನ್ನು ನೀಡಲಾಗಿದೆ. ಜೊತೆಗೆ ಫರ್ನಿಚರ್ ಕಾಮಗಾರಿಯು ಈಗಾಗಲೇ ಮುಗಿದಿದೆ.

ಮೂಡಲಗಿ ಹೊಸ ತಾಲೂಕು ರಚನೆಯಾದ ನಂತರ ಸಾರ್ವಜನಿಕರ ಬೇಡಿಕೆ ದಿನೇ ದಿನೇ ಹೆಚ್ಚುತ್ತಿತ್ತು. ಗೋಕಾಕದಲ್ಲಿ ರೈತರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಿರುವುದರಿಂದ ಮೂಡಲಗಿ ತಾಲೂಕಿನ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿಯೇ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭವಾಗಲಿದೆ. ಇಡೀ ತಾಲೂಕಿನ ರೈತರ ಸೇವೆಗೆ ಕಛೇರಿಯು ಅಣಿಯಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ