ಬೆಂಗಳೂರು : ಪಂಜಾಬ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ಯೋಧ ಶಿವರಾಜ್ ಎಂಬುವವರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ಯೋಧ ಶಿವರಾಜ್ ಹುತಾತ್ಮರಾಗಿದ್ದಾರೆ.
ಈ ಹಿನ್ನೆಲೆ ಮೃತಪಟ್ಟ ಯೋಧನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
Laxmi News 24×7