Breaking News

ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

Spread the love

ರಾಯಚೂರು: ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.

 

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.

ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. ‘ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ’ ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ