Breaking News

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

Spread the love

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ್ ಪ್ಲಾಟ್​​​ನಲ್ಲಿ ನಡೆದಿದೆ.

ಕಾಂಗ್ರೆಸ್ ಯುವ ಮುಖಂಡ ತೌಸಿಫ್ ಲಕ್ಕುಂಡಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ್ ಮನೆಯ ಬಳಿ ಪದೇ ಪದೆ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್​ ಎಂಬುವರ ನಡುವೆ ವಾಗ್ವಾದ ನಡೆದಿತ್ತು. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ ನಿನ್ನೆ ರಾತ್ರಿ ತೌಸಿಫ್​​ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಾಯಗೊಂಡ ತೌಸಿಫ್​ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್​​ಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ