Breaking News

ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ

Spread the love

ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು, ಬೈಕ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತವಾಗಿದ್ದು, ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಎರಡು ಕಾರು, ಟ್ರಕ್ ಹಾಗೂ 4ಕ್ಕೂ ಹೆಚ್ಚು ಬೈಕ್​ಗಳ ನಡುವೆ ಸರಣಿ ಅಪಘಾತವಾಗಿದೆ. ಇದಕ್ಕೂ ಮೊದಲು ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮೊಲ್ಯಾಸೀಸ್ ಸೋರಿಕೆಯಾಗಿದೆ. ಈ ಹಿನ್ನೆಲೆ ರಭಸವಾಗಿ ಬರುತ್ತಿದ್ದ ವಾಹನಗಳು ಸ್ಕೀಡ್ ಆಗಿ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿದೆ‌.

ಕಾರು, ಲಾರಿ ಜಖಂಗೊಂಡಿದ್ದು, ಸರಣಿ ಅಪಘಾತದಲ್ಲಿ ಒಬ್ಬ ಲಾರಿ ಚಾಲಕ ಮೃತಪಟ್ಟಿದ್ದಾರೆ. ಆತನ ಮಾಹಿತಿ ಲಭ್ಯವಾಗಿಲ್ಲ. ಸಣ್ಣ-ಪುಟ್ಟ ಗಾಯಗೊಂಡ‌ ನಾಲ್ವರನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ