Breaking News

ಗೋಕಾಕ್​​​ ಶಾಸಕರಿಗೆ, ಸವದಿಗೆ ಸಚಿವ ಸಂಪುಟ ಸ್ಥಾನಮಾನ ಕೊಡಲಿ: ಮಹೇಶ್​ ಕುಮಠಳ್ಳಿ

Spread the love

ಅಥಣಿ: ಗೋಕಾಕ್​​ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ. ನನಗೆ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ನನಗೆ ಸಚಿವ ಸಂಪುಟದಲ್ಲಿ ಸ್ಥಾನ ಬೇಡ ಎಂದು ಶಾಸಕ ಮಹೇಶ್ ಕುಮಠಳ್ಳಿ ಅವರು ಹೇಳಿಕೆ ನೀಡಿದ್ದಾರೆ.

ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ಅದರಿಂದ ನನಗೆ ಸಚಿವ ಸ್ಥಾನ ಬೇಡ ಎಂದು ಹೇಳಿ ನೀಡಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರಾ? ಎಂಬ ಪ್ರಶ್ನೆ ಮೂಡಿಸಿದೆ. ಹಲವು ಬಾರಿ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ ಅಥಣಿ ಶಾಸಕರು ಸದ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆ, ಸಚಿವ ಸ್ಥಾನದ ಆಸೆ ಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗೋಕಾಕ್​ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಈ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ ಹಾಗೂ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರು ಈ ಬಾರಿ ಸಚಿವ ಸಂಪುಟ ಲಿಸ್ಟ್​ನಲ್ಲಿ ಇದ್ದಾರೆ. ಅವರಿಗೆ ಈ ಬಾರಿ ಕ್ಯಾಬಿನೆಟ್ ಸ್ಥಾನಮಾನ ಫಿಕ್ಸ್ ಎಂದು ಭವಿಷ್ಯ ನುಡಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ