Breaking News

ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು: ಸಿದ್ದರಾಮಯ್ಯಗೆ ಕಾನ್‌ಸ್ಟೆಬಲ್‌ ಸವಾಲು!

Spread the love

ವಿಜಯಪುರ: ‘ಭಾರತ ಜೋಡೊ’ ಪಾದಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿ ಪೊಲೀಸ್‌ನವರೇನಾದರೂ ಶಾಮೀಲಾದ್ರೆ…’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆ ವಿಜಯಪುರ ಗ್ರಾಮೀಣ ಠಾಣೆ ಕಾನ್‌ಸ್ಟೆಬಲ್‌ವೊಬ್ಬರು ವಿರೋಧ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

 

‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್‌ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧಕ್ಕೆ ಕಾರಣವಾಗಿದೆ.

‘ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಬಿಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಪರಿಶೀಲನೆ:

‘ಕಾನ್‌ಸ್ಟೆಬಲ್‌ ತಮ್ಮ ಫೇಸ್‌ಬುಕ್‌ನಲ್ಲಿ ಕಾಮೆಟ್‌ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಸಂಬಂಧ ಇದುವರೆಗೆ ಯಾರೂ ದೂರು ಕೊಟ್ಟಿಲ್ಲ. ಕೊಟ್ಟರೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ