Breaking News

ಹಬ್ಬದ ಸಂಭ್ರಮದಲ್ಲೇ ಬೆಳಗಾವಿಯಲ್ಲಿ ಡೆಂಘೀ ದಾಂಗುಡಿ.. ಜ್ವರದಿಂದ ತಪ್ಪಿಸಿಕೊಳ್ಳಲು ಹೀಗೆಲ್ಲ ಮಾಡಿ

Spread the love

ಬೆಳಗಾವಿ: ಕೋವಿಡ್ ಕಾರಣಕ್ಕೆ ಎರಡು ವರ್ಷಗಳ ಕಾಲ ಮಂಕಾಗಿದ್ದ ಹಬ್ಬಗಳನ್ನು ಈ ಸಲ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂಬ ಖುಷಿಯಲ್ಲಿರುವಾಗಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಡೆಂಘೀ ದಾಂಗುಡಿ ಆತಂಕ ಸೃಷ್ಟಿಸಿದೆ.

ಬೆಳಗಾವಿಯಲ್ಲಿ ಪ್ರಸಕ್ತ ಜನವರಿಯಿಂದ ಸೆಪ್ಟೆಂಬರ್‌ವರೆಗೆ 207 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1,683ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿ ತಪಾಸಣೆ ನಡೆಸಲಾಗಿದೆ. ಡೆಂಘೀಯಿಂದಾಗಿ ನೆರೆ ರಾಜ್ಯದಲ್ಲಿ ಚಿಕಿತ್ಸೆಗೆ ಒಳಗಾಗಿ ಮೃತಪಟ್ಟವರ ಮಾಹಿತಿ ಇದೆ. ಈ ಮಧ್ಯೆ ಆರೋಗ್ಯ ಇಲಾಖೆಯಿಂದ ತಪಾಸಣಾ ಕ್ರಮ ಜರುಗಿಸಲಾಗಿದೆ.

ಆದರೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ‌ಆಕ್ಷೇಪಗಳೂ ವ್ಯಕ್ತವಾಗ್ತಿವೆ. ಲಾರ್ವಾ ಸಮೀಕ್ಷೆ, ಅರಿವು ಮೂಡಿಸುವುದು, ತ್ಯಾಜ್ಯ ವಿಲೇವಾರಿ, ಔಷಧ ಸಂಗ್ರಹ, ಬಿಳಿರಕ್ತ ಕಣಗಳ ಸಂಗ್ರಹ ಸೇರಿದಂತೆ ಇನ್ನಷ್ಟು ಮುಂಜಾಗ್ರತಾ ಕ್ರಮಗಳು ಅಗತ್ಯ ಇದೆ ಎನ್ನುತ್ತಾರೆ ಸೋಂಕಿತರು.

Thumbnail image


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ