Breaking News

ನವರಾತ್ರಿ ದಾಂಡಿಯಾ ಉತ್ಸವದಲ್ಲಿ ಶಶಿಕಲಾ ಜೊಲ್ಲೆ ಸಕತ್ ಸ್ಟೆಪ್ಸ್

Spread the love

ಚಿಕ್ಕೋಡಿ: ನವರಾತ್ರಿ (Navaratri) ಹಿನ್ನೆಲೆಯಲ್ಲಿ ಆಯೋಜಿಸಿದ್ದ ದಾಂಡಿಯಾ (Dandiya) ಉತ್ಸವ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಸಕತ್ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿಯಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಆಯೋಜಿಸಿದ್ದ ದಾಂಡಿಯಾ ಉತ್ಸವದಲ್ಲಿ ಮಹಿಳೆಯರು ಹಾಗೂ ಕುಟುಂಬಸ್ಥರೊಂದಿಗೆ ಶಶಿಕಲಾ ಜೊಲ್ಲೆ ದಾಂಡಿಯಾ ನೃತ್ಯ ಮಾಡಿದ್ದಾರೆ. ರಾಜಸ್ಥಾನಿ ವೇಷಭೂಷಣ ತೊಟ್ಟು ಮಿಂಚಿದ್ದಾರೆ. ಶಶಿಕಲಾ ಜೊತೆಗೆ ಅವರ ಪತಿ ಸಂಸದ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಅವರ ಪುತ್ರ ಬಸವಪ್ರಸಾದ ಜೊಲ್ಲೆ (Basava Prasad Jolle) ಹಾಗೂ ಕುಟುಂಬಸ್ಥರು ಭಾಗಿಯಾಗಿ ದಾಂಡಿಯಾ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ನೂರಾರು ಮಹಿಳೆಯರು ಈ ದಾಂಡಿಯಾ ಉತ್ಸವದಲ್ಲಿ ಭಾಗಿಯಾಗಿದ್ದರು

 


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ