Breaking News

ಚಂದ್ರಶೇಖರ ಗುರೂಜಿ ಹತ್ಯೆ; 800 ಪುಟದ ಚಾರ್ಜ್‌ಶೀಟ್‌

Spread the love

ಹುಬ್ಬಳ್ಳಿ: ಸರಳ ವಾಸ್ತು ಕಂಪೆನಿ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

 

ಗುರೂಜಿ ಹತ್ಯೆಗೆ ಸಂಬಂಧಿಸಿ ಪೊಲೀಸರು ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು. 5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲೊಂದರಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು.

ಘಟನೆ ನಡೆದ 4 ತಾಸಿನೊಳಗೆ ಪೊಲೀಸರು ಹಂತಕರನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಬಂಧಿತರ ವಿರುದ್ಧ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಸಹಿತ ಕೊಲೆಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಕಲೆ ಹಾಕಲಾದ ಮಾಹಿತಿ ಹಾಗೂ ಸಂಗ್ರಹಿಸಿದ ಸಾಕ್ಷಿಗಳು ಸೇರಿ 800ಕ್ಕೂ ಹೆಚ್ಚು ಪುಟಗಳುಳ್ಳ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯಕ್ತ ಲಾಭೂರಾಮ ತಿಳಿಸಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ