Breaking News

ಕಾಂಗ್ರೆಸ್ಸಿಗರ ‘ಭಾರತ ಬಿಟ್ಟು ಓಡೋ ಯಾತ್ರೆ’: ನಳಿನ್‍ ಕುಮಾರ್ ಕಟೀಲ್ ವ್ಯಂಗ್ಯ

Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ; ಅದು ‘ಭಾರತ ಬಿಟ್ಟು ಓಡೋ ಯಾತ್ರೆ’ಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದಿರುವ ನಾಯಕರು ಜೊತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ; ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ನಾಯಕರನೇಕರು ಒಬ್ಬೊಬ್ಬರಾಗಿ ಈಗಾಗಲೇ ಆ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ಮೂಲಕ ಗುರುತಿಸಿಕೊಂಡ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ಭಿನ್ನಮತ ಹಾಗೂ ಸಮರ್ಥ ನಾಯಕತ್ವದ ಕೊರತೆಯಿಂದ ನೆಲಕಚ್ಚಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ತೊರೆಯುವ ನಾಯಕರನ್ನು ಒಂದೆಡೆ ಸೇರಿಸಿ ಕಾಂಗ್ರೆಸ್ ಜೋಡೋ ಮಾಡಬೇಕಿದ್ದ ರಾಹುಲ್ ಗಾಂಧಿಯವರು ತಮ್ಮ ಮುತ್ತಾತ ನೆಹರೂ ಅವರು ದೇಶವನ್ನು ಇಬ್ಭಾಗ ಮಾಡಿದ್ದನ್ನು ಮರೆತಿದ್ದಾರೆ. ಇದು ಜಾಣಮರೆವಲ್ಲದೆ ಮತ್ತೇನಲ್ಲ. ಆದರೆ, 130 ಕೋಟಿ ಜನರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರು ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದು ಮಾಡಿ ದೇಶ ಜೋಡಿಸುವ ಕಾರ್ಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಶಾಶ್ವತ ಮೂಲೆಗುಂಪು: ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಕ್ಷ. ಹಿಂದೂ ವಿರೋಧಿ; ಜಾತಿ- ಜಾತಿಗಳ ನಡುವೆ, ಮತೀಯ ಸಂಘರ್ಷ ಹೆಚ್ಚಿಸುವ ಪಕ್ಷವಾದರೆ, ಬಿಜೆಪಿ ಸದಾ ಜನಹಿತ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷ ಎಂಬುದು ಜನರಿಗೆ ಅರಿವಾಗಿದೆ. ಕಾಂಗ್ರೆಸ್ ಪಕ್ಷದ ಆರು ದಶಕಗಳ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳನ್ನು ಗಮನಿಸಿದ ಮಹಾಜನತೆ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಮೂಲೆಗುಂಪು ಮಾಡುವ ನಿರ್ಧಾರ ಮಾಡಿದ್ದಾರೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರು ಭಾರತ್ ಜೋಡೋ ಮೂಲಕ ಕರ್ನಾಟಕಕ್ಕೆ ಪ್ರವೇಶ ಮಾಡುವ ಸಂದರ್ಭದಲ್ಲೇ ಇಲ್ಲಿನ ಕಾಂಗ್ರೆಸ್ ಮುಖಂಡರು ಎರಡು ತಂಡಗಳಾಗಿ ಸ್ವಾಗತ ಮಾಡಿದ್ದಾರೆ. ಮುಖ್ಯಮಂತ್ರಿ ಕುರ್ಚಿಯ ಹಗಲುಕನಸು ಕಾಣುವ ಸಿದ್ದರಾಮಯ್ಯ ಒಂದೆಡೆ ಸ್ವಾಗತ ಕೋರಿದರೆ, ಜೈಲಿನತ್ತ ಮುಖ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಮತ್ತು ಹಗರಲಿರುಳೂ ಸಿಎಂ ಕುರ್ಚಿಯ ತಿರುಕನ ಕನಸು ಕಾಣುವ ಡಿ.ಕೆ.ಶಿವಕುಮಾರ್ ಮತ್ತೊಂದೆಡೆ ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ್ದಾರೆ. ಇದು ಕಾಂಗ್ರೆಸ್ ಭಿನ್ನಮತಕ್ಕೆ ಸ್ಪಷ್ಟ ನಿದರ್ಶನ. ಇದನ್ನು ಜನತೆ ಗಮನಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ