ಧಾರವಾಡ: ಗುರುವಾರ ತಡರಾತ್ರಿ ಧಾರವಾಡ ಎಸ್ಪಿ ಕಚೇರಿ ಎದುರು ಅಪಘಾತ ನಡೆದಿತ್ತು. ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಿವಣ್ಣ ಬೆಲ್ಲದ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಹೋದರ ಶಿವಣ್ಣ ಬೆಲ್ಲದ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2008ರಲ್ಲಿ ಅಣ್ಣ ಚಂದ್ರಕಾಂತ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಿದ್ದರು.
Laxmi News 24×7