Breaking News

ಗಂಗಾವತಿಯಲ್ಲಿ ಜೋಡಿ ಚಿರತೆ ಪತ್ತೆ..

Spread the love

ಗಂಗಾವತಿ: ಬುಧವಾರವಷ್ಟೇ ಬಸವನದುರ್ಗಾ ಕಡೆಬಾಗಿಲು ಬಳಿ ಕಂಡು ಬಂದಿದ್ದ ಜೋಡಿ ಚಿರತೆಗಳು ಗುರುವಾರ ಮತ್ತೆ ತಾಲೂಕಿನ ಬಸವನದುರ್ಗಾ ಗೂಗಿಬಂಡೆ ಪ್ರದೇಶದಲ್ಲಿ ಪ್ರತ್ಯಕ್ಷವಾಗಿದ್ದು, ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಇವು ನಿನ್ನೆ(ಬುಧವಾರ) ಕಂಡಿದ್ದ ಚಿರತೆಗಳಾ ಅಥವಾ ಬೇರೆ ಚಿರತೆಗಳೆ? ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಕಳೆದ ಒಂದು ವಾರದಿಂದ ನಿರಂತರ ಈ ಭಾಗದಲ್ಲಿ ಚಿರತೆಗಳು ಸಾರ್ವಜನಿಕರಿಗೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Thumbnail image

ಸಾರ್ವಜನಿಕರಲ್ಲಿ ಅಸಮಾಧಾನ: ಕಳೆದ ಹಲವು ದಿನಗಳಿಂದ ಚಿರತೆಗಳು ಜನವಸತಿ ಸನಿಹದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಸಂಬಂಧಿತ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಇಲಾಖೆಯ ಅಧಿಕಾರಿಗಳು ಮುಂದಾಗಿಲ್ಲ ಎಂಬ ಅಸಮಾಧಾನ ಜನರಲ್ಲಿ ವ್ಯಕ್ತವಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ