Breaking News

ಹಳೆ ದ್ವೇಷದ ಹಿನ್ನೆಲೆಇಬ್ಬರು ಯುವಕರ ಕೊಲೆ

Spread the love

ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆ‌ ಎದುರು ಗುರುವಾರ ರಾತ್ರಿ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಸುಳೇಭಾವಿ ಗ್ರಾಮದ ರಣಧೀರ ಮಹೇಶ ಅಲಿಯಾಸ್ ರಾಮಚಂದ್ರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಯುವಕರನ್ನು ಹತ್ಯೆ ಮಾಡಲಾಗಿದೆ.

 

ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಶಿವಾಜಿ‌ಮಹಾರಾಜರ ಪ್ರತಿಮೆ ಎದುರು ಕೊಲೆ ಮಾಡಲಾಗಿದೆ. ಕೊಲೆ ಯಾರು ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ. ಮಾತೀಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಮಾರಿಹಾಳ ಇನ್ಸ್ಪೆಕ್ಟರ್ ಬಸ್ಸಾಪೂರೆ ಸೇರಿ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ