ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ ಹೊರಹಾಕಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ ಎಂದು ವಾಲ್ಮೀಕಿ ಸಮುದಾಯದ ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಕೊಂಡಗೂಳಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜನರು ಹೆಚ್ಚಿದ್ದೇವೆ. ನಮ್ಮ ಸಮುದಾಯಕ್ಕೆ ಗ್ರಾಪಂ ಸಿಬ್ಬಂದಿಗಳು ಅವಮಾನ ಮಾಡಿದ್ದಾರೆಂದು ಹಾಗೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಗ್ರಾಪಂ ಕಚೇರಿಯಲ್ಲಿ ವಾಲ್ಮೀಕಿ ಸಮುದಾಯದವರೇ ಪೊಟೋಗೆ ಪೂಜೆ ಸಲ್ಲಿಸಿ ಗ್ರಾಮಸ್ಥರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿದ್ದಾರೆ.
Laxmi News 24×7