Breaking News

ತಡರಾತ್ರಿ ಆಗಮಿಸಿದ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ B.L. ಸಂತೋಷ್ ಶಾಲು ಹೊದೆಸಿ ಸ್ವಾಗತಿಸಿದ ಬಾಲಚಂದ್ರ ಜಾರಕಿಹೊಳಿ ಇಂದು ಕನ್ಹೇರಿ ಮಠದ ಸಮಾವೇಶದಲ್ಲಿ ಭಾಗಿ

Spread the love

ಬೆಳಗಾವಿ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬೆಳಗಾವಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ಅವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತಲುಪಿದರು.

ಮಾಜಿ ಸಚಿವ, ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ ಶಾಲು ಹೊದೆಸಿ ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಮಹಾಂತೇಶ ದೊಡ್ಡಗೌಡರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜಯ ಪಾಟೀಲ ಹಾಗೂ ಡಾ.ರಾಜೇಶ ನೇರ್ಲಿ, ಮಹಾಂತೇಶ ವಕ್ಕುಂದ ಮೊದಲಾದವರು ಈ ಸಂದರ್ಭದಲ್ಲಿದ್ದರು.

ಸೋಮವಾರ ಬೆಳಗ್ಗೆ ಕನ್ಹೇರಿ ಮಠದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ ಬೆಳಗಾವಿಯಲ್ಲಿ ಭಾರತೀಯ ಜನತಾಪಾರ್ಟಿಯ ಕಾರ್ಯಕರ್ತರ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.


Spread the love

About Laxminews 24x7

Check Also

ಎಸ್​ಐಆರ್ ವಿರುದ್ಧ ತಾವೇ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ ಬ್ಯಾನರ್ಜಿ

Spread the loveನವದೆಹಲಿ, ಫೆಬ್ರವರಿ 04: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ  ಯನ್ನು ಪ್ರಶ್ನಿಸಿ ಪಶ್ಚಿಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ