Breaking News

ಅದ್ಧೂರಿ ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿ ಜಿಲ್ಲಾಡಳಿತ ಸಜ್ಜು: ಡಿಸಿ ನಿತೀಶ್ ಪಾಟೀಲ

Spread the love

ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳು ಸಾಧಾರಣವಾಗಿ ರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ವ್ಯವಸ್ಥಿತವಾಗಿ, ಅದ್ಧೂರಿಯಾಗಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು. ಜಿಲ್ಲೆಯಲ್ಲಿ ಈ ಬಾರಿ ಸ್ವಾತಂತ್ರೊö್ಯÃತ್ಸವ ದಿನಾಚರಣೆಗಿಂತಲೂ ರಾಜ್ಯೋತ್ಸವ ಅದ್ಧೂರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ (ಅ.10) ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವ್ಯವಸ್ಥಿತ ಪರೇಡ್ ಆಯೋಜನೆ:

ರಾಜ್ಯೋತ್ಸವ ಹಿನ್ನೆಲಯಲ್ಲಿ ನವೆಂಬರ್ 1 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆ, ಎನ್.ಸಿ., ಸ್ಕೌಟ್ಸ್ ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪರೇಡ್ ನಡೆಸಲಾಗುವುದು.ಈ ಮೂಲಕ ರಾಜ್ಯೋತ್ಸವದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ರಾಜ್ಯೋತ್ಸವ ಕಳೆ ಹೆಚ್ಚಿಸಬೇಕು ಎಂದು ಶಿಕ್ಷಣ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ವೈಭವಪೂರ್ಣ ರೂಪಗಳ ಮೆರವಣಿಗೆ:

ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳು ತಮ್ಮದೇ ಶೈಲಿಯಲ್ಲಿ ವೈಭವಪೂರ್ಣ ರೂಪಗಳನ್ನು ಪ್ರದರ್ಶಿಸಬೇಕು. ಜೊತೆಗೆ ಕನ್ನಡ ಪರ ವಿವಿಧ ಸಂಘಟನೆಗಳು ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸಲಿವೆ. ಭುವನೇಶ್ವರಿ ದೇವಿ ರೂಪಕಕ್ಕೆ ಪೂಜಿಸುವ ಮೂಲಕ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ನಗರದ ಪ್ರಮುಖ ಚೆನ್ನಮ್ಮ ವೃತ್ತ ಸೇರಿದಂತೆ ವಿವಿಧ ಮುಖ್ಯ ವೃತ್ತ, ರಸ್ತೆಗಳಲ್ಲಿ ರೂಪಕಗಳ ಮೆರವಣಿಗೆ ಸಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಅದ್ಭುತ ರೂಪಕಗಳಿಗೆ ಬಹುಮಾನ:

ಅತ್ಯಂತ ಅಲಂಕೃತ, ನಾಡ ಸಂಸ್ಕೃತಿ ಪ್ರತಿಬಿಂಬಿಸುವ ಅತ್ಯದ್ಭುತ ಮೂರು ರೂಪಕಗಳನ್ನು ಗುರುತಿಸಿ ಅವುಗಳನ್ನು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳೆಂದು ಗುರುತಿಸಲಾಗುವುದು. ಅವುಗಳಿಗೆ ಕ್ರಮವಾಗಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರು ಹೇಳಿದರು.

ನಾಡ ಸಂಸ್ಕೃತಿಗೆ ಒತ್ತು ನೀಡಿ:

ರೂಪಕಗಳ ಮೆರವಣಿಗೆ ಆಗಿರಬಹುದು ಅಥವ ಇನ್ನಿತರ ವೇದಿಕೆಯಲ್ಲಿ ಡಾಲ್ಬಿ, ಡಿಜೆಗಳನ್ನು ಅತೀಯಾಗಿ ಬಳಸಬೇಡಿ. ಇದರಿಂದ ಜನರಿಗೆ ವಿಪರೀತ ಕಿರಿಕಿರಿ ಆಗಬಹುದು. ಹೀಗಾಗಿ ಪಾಶ್ಚಿಮಾತ್ಯ ಸಂಸ್ಕೃತಿ ಬಿಂಬಿಸುವ ಚಟುವಟಿಕೆಗಳಿಗೆ ಒತ್ತು ನೀಡುವುದಕ್ಕಿಂತ ನಾಡು, ನುಡಿ, ಕಲೆ, ಸಂಸ್ಕೃತಿ ಬಿಂಬಿಸುವ ಚುಟುವಟಿಕೆಗಳಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಕಿವಿ ಮಾತು ಹೇಳಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ