Breaking News

ಬಿಜೆಪಿಯಿಂದ ರಾಜ್ಯ ಪ್ರವಾಸ: ಜನಸಂಕಲ್ಪ ಯಾತ್ರೆಗೆ ನಾಳೆ ರಾಯಚೂರಿನಲ್ಲಿ ಚಾಲನೆ

Spread the love

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಗೆ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಕೇಸರಿ ಅಲೆ ಎಬ್ಬಿಸಲು ಬಿಜೆಪಿ ಮುಂದಾಗಿದ್ದು, ಜನಸಂಕಲ್ಪ ಯಾತ್ರೆಯನ್ನು ಆರಂಭಿಸುತ್ತಿದೆ. ನಾಳೆ ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಆರಂಭಗೊಳ್ಳಲಿದೆ.

ನಾಳಿನ ಯಾತ್ರೆಯ ಆರಂಭದಲ್ಲಿ 50 ಸಾವಿರ ಜನ ಸೇರಲಿದ್ದು, ರಾಜ್ಯದಲ್ಲಿ ಎಲ್ಲರ ಗಮನ ಸೆಳೆಯುವ ಯಾತ್ರೆ ಇದಾಗಲಿದೆ. ಅ.12 ರಂದು ವಿಜಯನಗರ, ಕುಷ್ಟಗಿ, 13 ರಂದು ಹೂವಿನ ಹಡಗಲಿ, ಸಿರುಗುಪ್ಪದಲ್ಲಿ ಯಾತ್ರೆ ನಡೆಯಲಿದೆ.18 ರಂದು ಔರಾದ್ ಮತ್ತು ಹುಮ್ನಾಬಾದ್, 19 ರಂದು ಸುರಪುರ ಮತ್ತು ಕಲಬುರಗಿ ಗ್ರಾಮೀಣ, 23 ರಂದು ಚಿತ್ತಾಪುರ ಮತ್ತು ಆಳಂದದಲ್ಲಿ ಯಾತ್ರೆ ನಡೆಯಲಿದ್ದು, ಅಕ್ಟೋಬರ್ 30 ರಂದು ಕಲ್ಬುರ್ಗಿಯಲ್ಲಿ ಬೃಹತ್ ಒಬಿಸಿ ಸಮಾವೇಶ ನಡೆಸಲಾಗುತ್ತದೆ.

ವಾರದಲ್ಲಿ ಆರು ಕ್ಷೇತ್ರದಲ್ಲಿ ಯಾತ್ರೆ: ವಾರದಲ್ಲಿ ಮೂರು ದಿನ ಆರು ಕ್ಷೇತ್ರದಂತೆ ಯಾತ್ರೆ ನಡೆಯಲಿದೆ. ಕಟೀಲ್ ತಂಡ 50 ಕ್ಷೇತ್ರ, ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿಎಸ್​ವೈ ತಂಡ 50 ಮತ್ತು ಅರುಣ್ ಸಿಂಗ್ 25 ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಡಿಸೆಂಬರ್ 25 ರೊಳಗೆ ಒಟ್ಟು 125 ಕ್ಷೇತ್ರ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ