Breaking News

ಎಸ್‌ಸಿ-ಎಸ್‌‍ಟಿ ಮೀಸಲಾತಿ; ಬಿಜೆಪಿ ತಪ್ಪು ದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ, ಈ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್‌ಸಿ-ಎಸ್‌‍ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಆರೋಪಿಸಿದ್ದಾರೆ.

 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರ ನೇಮಿಸಿದ್ದ ನ್ಯಾ. ನಾಗಮೋಹನ್ ದಾಸ್ ಸಮಿತಿಯ ಶಿಫಾರಸಿನಂತೆ ಎಸ್‌ಸಿ-ಎಸ್‌‍ಟಿ ಮೀಸಲಾತಿ ಹೆಚ್ಚಿಸುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಈ ನಿರ್ಧಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದಿದ್ದರೆ ಇದು ಬಿಜೆಪಿಯ ಸುಳ್ಳಿನ ಕಂತೆಗೆ ಇನ್ನೊಂದು ಸೇರ್ಪಡೆಯಾಗುತ್ತದೆ ಅಷ್ಟೆ ಎಂದು ಹೇಳಿದರು.

: ಮಹಾರಾಷ್ಟ್ರದಲ್ಲಿ ಕನ್ನಡ ಭವನ: ರಾಜ್ಯ ಸರ್ಕಾರದಿಂದ ₹3 ಕೋಟಿ ನೆರವು- ಬೊಮ್ಮಾಯಿ

ಎಸ್‌ಸಿ-ಎಸ್‌‍ಟಿ ಮೀಸಲಾತಿ ಹೆಚ್ಚಳದ ಅನುಷ್ಠಾನದ ಪ್ರಕ್ರಿಯೆ ದೀರ್ಘವಾದುದು ಮಾತ್ರವಲ್ಲ ಆಳುವ ಪಕ್ಷದ ರಾಜಕೀಯ ಇಚ್ಛಾಶಕ್ತಿಯನ್ನೂ ಅವಲಂಬಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಲಿ, ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರಿಗಾಗಲಿ ಕೇಂದ್ರ ಸರ್ಕಾರದಿಂದ ಈ ಕೆಲಸ ಮಾಡಿಸುವ ಶಕ್ತಿ ಇದೆಯೇ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ