Breaking News

ಲೋಕಾಯುಕ್ತದ ಖಾಲಿ ಹುದ್ದೆಗಳ ಭರ್ತಿ ಜತೆಯಲ್ಲೇ ಸಂಸ್ಥೆಗೆ ಹೆಚ್ಚಿನ ಬಲ ತುಂಬಲು ಹೊಸ ಹುದ್ದೆಗಳನ್ನು ಸೃಜಿಸಲು ರಾಜ್ಯ ಸರ್ಕಾರ ಸಮ್ಮತಿ

Spread the love

ಬೆಂಗಳೂರು: ಲೋಕಾಯುಕ್ತದ ಖಾಲಿ ಹುದ್ದೆಗಳ ಭರ್ತಿ ಜತೆಯಲ್ಲೇ ಸಂಸ್ಥೆಗೆ ಹೆಚ್ಚಿನ ಬಲ ತುಂಬಲು ಹೊಸ ಹುದ್ದೆಗಳನ್ನು ಸೃಜಿಸಲು ರಾಜ್ಯ ಸರ್ಕಾರ ಸಮ್ಮತಿಸಿದೆ. ಈ ಸಂಬಂಧ ಪ್ರಸ್ತಾವ ಸಲ್ಲಿಸಲು ಡಿಪಿಎಆರ್‌ ಅಧಿಕಾರಿಗಳು ಲೋಕಾಯುಕ್ತರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಪ್ರಸ್ತಾವ ಸಲ್ಲಿಸಲು ಡಿಪಿಎಆರ್‌ ಅಧಿಕಾರಿಗಳು ಲೋಕಾಯುಕ್ತರಿಗೆ ಪತ್ರ ಬರೆದಿದ್ದಾರೆ.

ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಅಡಿ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ನೀಡಿದ್ದ ಅಧಿಕಾರವನ್ನು 2016ರಲ್ಲಿ ಹಿಂಪಡೆಯಲಾಗಿತ್ತು. ಆ ಬಳಿಕ ಸಂಸ್ಥೆಯಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳು ಖಾಲಿ ಇದ್ದವು.

ಆಗಸ್ಟ್‌ 11ರ ಹೈಕೋರ್ಟ್‌ ಆದೇಶ
ದಂತೆ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಪೊಲೀಸ್‌ ಠಾಣೆಗಳ ಸ್ಥಾನಮಾನ ನೀಡಿ ಸೆಪ್ಟೆಂಬರ್‌ 9ರಂದು ಆದೇಶ ಹೊರಡಿಸಲಾಗಿತ್ತು. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಎಲ್ಲ ಪ್ರಕರಣಗಳು, ದೂರುಗಳನ್ನು ಲೋಕಾಯುಕ್ತಕ್ಕೆ ವರ್ಗಾ
ಯಿಸಲು ಡಿಪಿಎಆರ್‌ ಆದೇಶಿಸಿತ್ತು.

ಲೋಕಾಯುಕ್ತ ಪೊಲೀಸ್‌ ವಿಭಾಗದಲ್ಲಿ 534 ಹುದ್ದೆಗಳ ಮಂಜೂರಾತಿ ಇದೆ. ಒಂದು ಐಜಿಪಿ, ಮೂರು ಎಸ್‌ಪಿ, ಐದು ಡಿವೈಎಸ್‌ಪಿ, 10 ಇನ್‌ಸ್ಪೆಕ್ಟರ್‌ ಸೇರಿ ಕೆಲ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿ ಜತೆಗೆ ಎಸಿಬಿಯಲ್ಲಿರುವ 322 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೂ ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ವರ್ಗಾಯಿಸುವಂತೆ ಲೋಕಾಯುಕ್ತರು ಕೋರಿದ್ದರು.

ಮೂಡದ ಸಹಮತ: ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಚಿಕೆಗೆ ಸಂಬಂಧಿಸಿದಂತೆ ಡಿಪಿಎಆರ್‌ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮತ್ತು ಲೋಕಾಯುಕ್ತದ ಹಿರಿಯ ಅಧಿಕಾರಿಗಳು ಹಲವು ಸುತ್ತಿನ ಚರ್ಚೆ ನಡೆಸಿದ್ದರು. ಆದರೆ, ಎಸಿಬಿ ಪೊಲೀಸ್‌ ಘಟಕವನ್ನು ಸಮಗ್ರವಾಗಿ ಲೋಕಾಯುಕ್ತದಲ್ಲಿ ವಿಲೀನಗೊಳಿಸುವ ಬೇಡಿಕೆ ಕುರಿತು ಸಹಮತ ಮೂಡಿರಲಿಲ್ಲ.


Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ