Breaking News

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ್ಧ ಸಾವು

Spread the love

ಗದಗ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದಿದೆ. ತಿಮ್ಮಣ್ಣ (50) ಮೃತರು.

ಸತತವಾಗಿ ಸುರಿದಿದ್ದ ಮಳೆಗೆ ಮನೆ ಗೋಡೆ ಸಂಪೂರ್ಣವಾಗಿ ಶಿಥಿಲಗೊಂಡಿತ್ತು. ಮನೆಯಲ್ಲಿ ಮಲಗಿದ್ದಾಗ ಏಕಾಏಕಿ ಗೋಡೆ ಕುಸಿದು ಮೈಮೇಲೆ ಬಿದ್ದಿದೆ. ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿ ಮಣ್ಣಿನ ಅಡಿ ಸಿಲುಕಿದ್ದ ತಿಮ್ಮಣ್ಣ ಅವರ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ತಿಮ್ಮಣ್ಣ ಅಲಿಯಾಸ್​ ಅಪ್ಪಣ್ಣ ಕಳ್ಳಿಮನಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಗದಗ ತಹಶೀಲ್ದಾರ್ ಕಿಶನ್ ಕಲಾಲ್ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ