Breaking News
Home / ಜಿಲ್ಲೆ / ಬೆಳಗಾವಿ / 2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

2012-13ನೇ ಸಾಲಿನ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ಗೋಲ್​ ಮಾಲ್​: ಅಭ್ಯರ್ಥಿಯ ಆರೋಪ

Spread the love

ಬೆಳಗಾವಿ: 2012-13ನೇ ಸಾಲಿನಲ್ಲಿ ನಡೆದ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ನೇಮಕಾತಿ ವಂಚಿತ ಅಭ್ಯರ್ಥಿ ಮಹಾಂತೇಶ ರುದ್ರಪ್ಪ ಬೆಣ್ಣಿ ಆರೋಪಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012 ಜುಲೈ 15ರಂದು ಜನರಲ್, 17ರಂದು ಕನ್ನಡ ಭಾಷಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಪ್ರತಿಶತ 71. 26 ಅಂಕ 89 ರ‍್ಯಾಂಕ್ ಪಡೆದಿದ್ದೇನೆ. 89 ರ್ಯಾಂಕ್ ಪಡೆದು ಆಯ್ಕೆ ಆದರೂ ನಾನು ನೇಮಕಗೊಂಡಿಲ್ಲ. ಆದರೆ, 70.93 ಅಂಕಗಳೊಂದಿಗೆ 97 ರ‍್ಯಾಂಕ್ ಪಡೆದವ ಆಯ್ಕೆಯಾಗಿದ್ದಾನೆ. ತಪ್ಪು ಉತ್ತರವನ್ನು ತಿದ್ದಿ ಆತನನ್ನು ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಶಿಕ್ಷಕರ ಆಯ್ಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಪಾರದರ್ಶಕವಾಗಿಲ್ಲ. ಮಾಹಿತಿ ಹಕ್ಕು ಅಧಿನಿಯಮ ಪ್ರಕಾರ ಮಾಹಿತಿ ಪಡೆದಿದ್ದೇನೆ. ಇದರಿಂದಾಗಿ ನನಗೆ ಅನ್ಯಾಯವಾಗಿದ್ದು, ಸ್ಪಷ್ಟವಾಗಿ ತಿಳಿದು ಬಂದಿದೆ. ನ್ಯಾಯಕ್ಕಾಗಿ ರಾಜ್ಯಪಾಲರಿಗೂ ಪತ್ರ ಬರೆದು ಮನವಿ ಮಾಡಿದ್ದೇನೆ. ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ