Breaking News

24 ಗಂಟೆಗಳಲ್ಲಿ ಎಫ್‌ಐಆರ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು

Spread the love

ಬೆಂಗಳೂರು: “ಪ್ರಥಮ ವರ್ತಮಾನ ವರದಿ’ (ಎಫ್‌ಐಆರ್‌) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಈ ವಿಚಾರವಾಗಿ ವಕೀಲ ಎಸ್‌.

ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಎಫ್‌ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್‌ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್ ಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತಾ ಬಂದಿತ್ತು.

ಈ ಮಧ್ಯೆ, ಎಸಿಬಿಯನ್ನು ರದ್ದುಗೊಳಿಸಿ 2022ರ ಆ.11ರಂದು ತೀರ್ಪು ನೀಡಿದ ಹೈಕೋರ್ಟ್‌, ಲೋಕಾಯುಕ್ತದ ಅಧಿಕಾರವನ್ನು ಮರುಸ್ಥಾಪಿಸಿ ಆದೇಶಿಸಿದೆ. ಆದರೆ, ಎಫ್‌ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್‌ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಇದರಿಂದ ಮುಂದಿನ ಕಾನೂನು ಪ್ರಕ್ರಿಯೆಗೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ.

ಈ ಬಗ್ಗೆ ಅರ್ಜಿದಾರರು 2022ರ ಸೆ.19ರಂದು ದೂರು ಕೊಟ್ಟಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಆದ್ದರಿಂದ ಎಫ್‌ಐಆರ್‌ ದಾಖಲಾದ 24 ಗಂಟೆಗಳಲ್ಲಿ ಅದನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ