Breaking News

ಅ.15ರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 5500 ರೂ. ಘೋಷಿಸಿ, ರೈತರಿಗೆ ಸಿಹಿ ಸುದ್ದಿ ಕೊಡಿ: ಸಿಎಂ ಬೊಮ್ಮಾಯಿಗೆ ಬೆಳಗಾವಿ ರೈತ ಮುಖಂಡರ ಆಗ್ರಹ..!

Spread the love

ಪಂಜಾಬ್, ಉತ್ತರಪ್ರದೇಶ ರಾಜ್ಯದಲ್ಲಿ 3800 ರೂಪಾಯಿ ಘೋಷಣೆ ಮಾಡಿದ್ದಾರೆ. ಅದಕ್ಕಿಂತ ಹೆಚ್ಚು 5500 ರೂಪಾಯಿಯನ್ನು ಕರ್ನಾಟಕದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಆಗ್ರಹಿಸಿದ್ದಾರೆ.

ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಘೋಷಣೆ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತ ಮುಖಂಡರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಆದರೆ ಅಕ್ಟೋಬರ್ 15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದಿರುವ ಹಿನ್ನೆಲೆ ಮಂಗಳವಾರ ತಡರಾತ್ರಿ ರೈತ ಮುಖಂಡರು ತಮ್ಮ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿದ್ದರು. ಬಳಿಕ ಬುಧವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಮುಖಂಡ ಚೂನಪ್ಪ ಪೂಜಾರಿ ಎರಡು ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಿರಂತರವಾಗಿ ಧರಣಿ ನಡೆಸುತ್ತಿದ್ದೇವು.

ನಮ್ಮ ಹೋರಾಟ ಬಹಳ ತೀವ್ರಗತಿಯಲ್ಲಿ ನಡೆಯುತ್ತಿತ್ತು. ನಾವು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಕ್ಕರೆ ಸಚಿವರು ಬೆಳಗಾವಿಗೆ ಬಂದು ಸಭೆ ಮಾಡಬೇಕು ಎಂದು ಆಗ್ರಹಿಸಿದ್ದೇವು. ನಮ್ಮ ಹೋರಾಟಕ್ಕೆ ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಬೆಳಗಾವಿ ವಕೀಲರ ಸಂಘ ಕೂಡ ಬೆಂಬಲ ಸೂಚಿಸಿದ್ದರು. ಇಂದು ಸಕ್ಕರೆ ಆಯುಕ್ತರ ಕಚೇರಿಗೆ ಬೀಗ ಹಾಕಿ ದೊಡ್ಡ ಮಟ್ಟದ ಪ್ರತಿಭಟನೆಗೆ ನಿರ್ಧರಿಸಿದ್ದೇವು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ