Breaking News

ಯಶಸ್ವಿನಿ ಯೋಜನೆ ಮರು ಜಾರಿ: ನವೆಂಬರ್ 1ರಿಂದ ನೋಂದಣಿ ಪ್ರಾರಂಭ, ಮಾರ್ಗಸೂಚಿ ನಿಗದಿ

Spread the love

ಬೆಂಗಳೂರು : ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.

ಈ ಕುರಿತು ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು.

ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ