Breaking News

ಡಾ. ಪ್ರಭಾಕರ ಕೋರೆಯವರ ಅಮೃತ ಮಹೋತ್ಸವ ; ೧ ಲಕ್ಷಕ್ಕಿಂತ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ;ಮಹಾಂತೇಶ ಕವಟಗಿಮಠ

Spread the love

ಅಕ್ಟೋಬರ 15 ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಡಾ! ಪ್ರಭಾಕರ ಕೋರೆಯವರ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ 1 ಲಕ್ಷಕ್ಕಿಂತ ಅಧಿಕ ಜನರು ಭಾಗಿಯಾಗಲಿದ್ದಾರೆ ಎಂದು ಮಾಜಿ ವಿಧಾನಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು..

ಚಿಕ್ಕೋಡಿ ತಾಲೂಕಿನ ನಣದಿಯ ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಶಿಕ್ಷಣ,ವೈದ್ಯಕೀಯ,ಉದ್ಯಮ,ರಾಜಕೀಯ, ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಗಾಧವಾದ ಸಾಧನೆ ಮಾಡಿರುವ ಡಾ! ಪ್ರಭಾಕರ ಕೋರೆಯವರ ಕಾರ್ಯ ಶ್ಲಾಘನೀಯ. ನಾವು ಡಾ! ಪ್ರಭಾಕರ ಕೋರೆಯವರ 75 ನೇ ಹುಟ್ಟುಹಬ್ಬವನ್ನು ಅಮೃತಮಹೋತ್ಸವ ಕಾರ್ಯಕ್ರಮವನ್ನು ಅಮೃತಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದೇವೆ.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಧಮೇಂದ್ರ ಪ್ರಧಾನಜಿ,ಗೌರವ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ರಾಜ್ಯದ ಮುಖ್ಯಮಂತ್ರಿ ಡಾ! ಪ್ರಮೋದ ಸಾವಂತ,ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಡಾ!ಶಾಮನೂರ ಶಿವಶಂಕರಪ್ಪ,ಮಹಾರಾಷ್ಟ್ರದ ಸಚಿವರಾದ ರಾಧಾಕೃಷ್ಣ ಪಾಟೀಲಯವರು ಭಾಗಿಯಾಗಲಿದ್ದಾರೆ ಹಾಗೂ ಈ ಅಮೃತಮಹೋತ್ಸವ ಕಾರ್ಯಕ್ರಮಕ್ಕೆ 1 ಲಕ್ಷಕ್ಕಿಂತ ಅಧಿಕ ಜನ ಭಾಗಿಯಾಗಲಿದ್ದಾರೆ ಎಂದು ಮಹಾಂತೇಶ ಕವಟಗಿಮಠ ತಿಳಿಸಿದರು..

 

ಈ ಪತ್ರಿಕಾಗೋಷ್ಠಿಯಲ್ಲಿ ಚಿದಾನಂದ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಭರತ ಬನವಣೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ,ಡಾ!ಪ್ರಭಾಕರ ಕೋರೆ ಬ್ಯಾಂಕಿನ ಅಧ್ಯಕ್ಷರಾದ ಮಹಾಂತೇಶ ಪಾಟೀಲ, ಉಪಾಧ್ಯಕ್ಷ ಸಿದಗೌಡ ಮಗದುಮ್ ಸೇರಿದಂತೆ ಚಿದಾನಂದ ಕೋರೆ ಸಕ್ಕರೆ ಹಾಗೂ ಡಾ! ಪ್ರಭಾಕರ ಕೋರೆ ಬ್ಯಾಂಕಿನ ನಿರ್ದೇಶಕರು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ