Breaking News

ಬಿಜೆಪಿಯವರದ್ದು ಸುಳ್ಳು ಹೇಳುವ ಸಂಕಲ್ಪ ಯಾತ್ರೆ: ಸಿದ್ದರಾಮಯ್ಯ ಟೀಕೆ

Spread the love

ಬೆಂಗಳೂರು: ಬಿಜೆಪಿಯವರದು ಜನಸಂಕಲ್ಪ ಯಾತ್ರೆಯಲ್ಲ, ಸುಳ್ಳು ಹೇಳುವ ಸಂಕಲ್ಪದ ಯಾತ್ರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿಜೆಪಿಯವರು ಅವರ ಯಾತ್ರೆಗಳಲ್ಲಿ ನನ್ನನ್ನು ಗುರಿಯಾಗಿಸಿಕೊಂಡು ಸುಳ್ಳುಗಳನ್ನು ಹೇಳಿದ್ದಾರೆ.

ನೀವು ಏನು ಹೇಳುವುದಿದ್ದರೂ ಅಂಕಿ ಅಂಶಗಳನ್ನು ಇಟ್ಟುಕೊಂಡು ಮಾತನಾಡಿದರೆ ಬೊಮ್ಮಾಯಿ ಮತ್ತು ಯಡಿಯೂರಪ್ಪ ಇಬ್ಬರಿಗೂ ಒಂದಿಷ್ಟು ತೂಕ ಬರುತ್ತದೆ. ತಮ್ಮ ಸ್ಥಾನದ ಘನತೆಗಳನ್ನು ನಿರ್ಲಕ್ಷಿಸಿ ಮಾತನಾಡುತ್ತಾ ಹೋದರೆ ರಾಜ್ಯದ ಜನ ಬಿಜೆಪಿಯವರನ್ನು ವಿದೂಷಕರು ಎನ್ನುತ್ತಾರೆ ಎಂದರು.

ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ಸಿಗೆ ಹಿಂದುಳಿದ ವರ್ಗದವರು, ದೀನ ದಲಿತರು ನೆನಪಾಗಲಿಲ್ಲ ಎಂದು ಬೊಮ್ಮಾಯಿಯವರು ರಾಯಚೂರಿನಲ್ಲಿ ಹೇಳಿದ್ದಾರೆ.

2013 ರಿಂದ 2018 ರವರೆಗೆ ಕಾಂಗ್ರೆಸ್ ಸರ್ಕಾರ ದಲಿತರು ಮತ್ತು ಹಿಂದುಳಿದ ಸಮುದಾಯಗಳಿಗೆ ಏನು ಮಾಡಿತ್ತು ಎಂದು ಕಡತಗಳನ್ನು ತರಿಸಿಕೊಂಡು ನೋಡಿ ಮಾತನಾಡಬೇಕೆ ಹೊರತು ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿರುವುದು ಸುಳ್ಳು ಹೇಳುವುದಕ್ಕಲ್ಲ. ಸಿಎಂ ಆದಿಯಾಗಿ ಬಹುತೇಕ ಬಿಜೆಪಿಯವರು ತಾವು ಆರೆಸ್ಸೆಸ್ಸಿಗರು ಎಂದು ಹೇಳಿಕೊಳ್ಳಲಾರಂಭಿಸಿದ್ದಾರೆ. ಬೊಮ್ಮಾಯಿ, ಯಡಿಯೂರಪ್ಪ ಮುಂತಾದವರೆಲ್ಲ ಆರೆಸ್ಸೆಸ್ ಎಂದು ಹೇಳಿಕೊಳ್ಳುತ್ತಿರುವುದು ದೇಶದ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು.

ಬ್ರಹ್ಮಾಂಡ ಭ್ರಷ್ಟಾಚಾರದ ಹೊಲಸನ್ನು ಮೆತ್ತಿಕೊಂಡವರು, ಜನರನ್ನು ಕೊಂದು ಅಧಿಕಾರಕ್ಕೆ ಏರಿದ ಎಲ್ಲ ಬಿಜೆಪಿಗರು ಆರೆಸ್ಸೆಸ್ ಎಂದು ಬೇಗ ಘೋಷಿಸಿಕೊಂಡಷ್ಟೂ ಒಳ್ಳೆಯದೆಂದು ನಾಡಿನ ಬಗ್ಗೆ ಕಾಳಜಿ ಇರುವ ಜನ ಬಯಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ