ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೀವ ಹಾನಿಯ ಜೊತೆಗೆ ಹೊಲಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದೆ. ಇದರ ಜೊತೆಗೆ ರಸ್ತೆಗಳು ಸಹ ಕಿತ್ತು ಹೋಗಿವೆ.
ಇದೀಗ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಆಯ್ದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ 24 ಗಂಟೆಗಳೊಳಗಾಗಿ ಪರಿಹಾರ ವಿತರಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ರಾಜ್ಯದಲ್ಲಿ ಮಳೆಯಿಂದಾಗಿ ಮೃತಪಟ್ಟ 13 ಮಂದಿಯ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಯಾವುದೇ ವಿಳಂಬ ಮಾಡದೆ ತ್ವರಿತವಾಗಿ ಮಳೆ ಹಾನಿ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
Laxmi News 24×7