ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ. 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ.
ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರ್ ನಲ್ಲಿ ಬಂದ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ.
ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದರು. ಶಾಸಕರ ಅಧಿಕೃತ ಕಾರು ಆ ಕಾರನ್ನು ಹಿಂಬಾಲಿಸುತ್ತಿತ್ತು. ಹರೀಶ್ ಪೂಂಜಾ ಅವರ ಅಧಿಕೃತ ವಾಹನ ಚಾಲಕ ಶಾಸಕರ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ಬೈದು, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7