ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳಗಾರ ರೈತರನ್ನು ಕಡೆಗಣಿಸುತ್ತಿದೆ ಎಂದು ಬೆಳಗಾವಿಯಲ್ಲಿ ರೈತಪರ ಸಂಘಟನೆಗಳು ಆರೋಪಿಸಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದವು.
ಹೌದು ಬೆಳಗಾವಿ ನಗರದಲ್ಲಿ ಇಂದು ವಿವಿಧ ರೈತಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಸರಕಾರ ಉತ್ತರ ಕರ್ನಾಟಕ ಭಾಗದ ಕಬ್ಬು ಬೆಳಗಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ಹಾಗಾಗಿ ಕಬ್ಬು ಬೆಳಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೂಡಲೇ ರಾಜ್ಯ ಸರಕಾರ ಎಲ್ಲಾ ರೈತರ ಸಮಸ್ಯೆಗಳನ್ನು ಪರಿಹಾರ ಮಾಡಬೇಕೆಂದು ಒತ್ತಾಯಿಸಿ ಇಂದು ನಗರದಲ್ಲಿ ಎಲ್ಲಾ ರೈತಪರ ಸಂಘಟನೆಗಳು ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದವು.
ಪ್ರತಿಭಟನಾ ರ‍್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿ ಮನವಿ ಮಾಡಲು ಬಂದ ರೈತ ಮುಖಂಡರನ್ನು ಈ ವೇಳೆ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತ ಮುಖಂಡರ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಅಲ್ಲಿ ರೈತರನ್ನು ತಡೆಯಲು ಅಳವಡಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆಗೆದು ತಮಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ರೈತ ಮುಖಂಡರು ವಾಗ್ವಾದಕ್ಕಿಳಿದರು.