ಹಾವು ಕಚ್ಚಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಬಾಲಕನನ್ನು ಸೂಕ್ತ ಸಮಯಕ್ಕೆ ಅಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಮಗುವಿನ ಪ್ರಾಣವನ್ನು ಕಾಪಾಡಿ ಮಾನವೀಯತೆ ಮೆರೆದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಗ್ರಾಮದಲ್ಲಿ ನಡೆದಿದಿದೆ.
ಹೌದು ಬೆಳಗಾವಿ ತಾಲೂಕಿನ ದೇಸೂರು ಗ್ರಾಮದಲ್ಲಿ ಗಣೇಶ ಅಜೀತ್ ಲೋಹಾರ್(11) ಎಂಬ ಬಾಲಕನಿಗೆ ಹಾವು ಕಚ್ಚಿತ್ತು. ಈ ವೇಳೆ ಪ್ರಜ್ಞಾಹೀನನಾಗಿ ಬಿದ್ದಿದ್ದ ಬಾಲಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ.
ಈ ವೇಳೆ ದೇಸೂರಿನ ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತ ಹಾಗೂ ಸಮಾಜಸೇವಕರಾದ ವೆಂಕಟ ಪಾಟೀಲ್ ಮಗುವನ್ನು ಅಂಬ್ಯುಲೆನ್ಸ್ನಲ್ಲಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಿ ಮಗುವಿನ ಪ್ರಾಣವನ್ನು ಕಾಪಾಡಿದ್ದಾರೆ.
ಈ ಮೂಲಕ ಮಾನವೀಯತೆ ಎಲ್ಲಕ್ಕಿಂದ ದೊಡ್ಡದು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ವೆಂಕಟ್ ಪಾಟೀಲ್‌ರವರ ಮಾನವೀಯ ಕಾರ್ಯಕ್ಕೆ ದೇಸೂರ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.