Breaking News

ಎರಡು ತಲೆ ಹಾವು ಮಾರಾಟ ಯತ್ನ: ಹುಬ್ಬಳ್ಳಿಯಲ್ಲಿ ಮೂವರ ಬಂಧನ

Spread the love

ಹುಬ್ಬಳ್ಳಿ: ಅಕ್ರಮವಾಗಿ ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಬಂಧಿಸಿ ಅವರಿಂದ ಕಾರು ವಶಪಡಿಸಿಕೊಳ್ಳುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರು ರಾಯಚೂರು ಮೂಲದವರು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಗಳ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅರಣ್ಯ ಸಂರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ಎರಡು ತಲೆಯ ಹಾವನ್ನು ಮಾರಾಟ ಮಾಡಲು ಆರೋಪಿಗಳು ಆಗಮಿಸಿದ್ದರು. ಇದರ ಖಚಿತ ಮಾಹಿತಿಯ ಮೇರೆಗೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಹಾವನ್ನು ವಶಕ್ಕೆ ಪಡೆದಿದ್ದಾರೆ.

:


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ