Breaking News

ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಗೆ ಸ್ವಾಗತಿಸಲಾಯಿತು.: ಅನಿಲ್ ಬೆನಕೆ

Spread the love

ಬೆಳಗಾವಿ,  ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ್ ಬೆನಕೆ ಅವರು ವೀರಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬರಮಾಡಿಕೊಂಡರು.

 

ನಂತರ ಮಾತನಾಡಿದ ಅವರು, ಈ ಬಾರಿ ರಾಜ್ಯಾದ್ಯಂತ ವೀರಜ್ಯೋತಿಯು ಸಂಚಾರ ಮಾಡುತ್ತಿರುವುದು ವಿಶೇಷ ಸಂಗತಿಯಾಗಿದೆ ಎಂದರು.

 


ಈ‌ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

 

ಬ್ರಿಟೀಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಕಿತ್ತೂರು ಚೆನ್ನಮ್ಮನ ಉತ್ಸವವನ್ನು ಆಚರಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ.

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವತಃ ಮುತುವರ್ಜಿ ವಹಿಸಿ ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಹೆಚ್ಚಿನ ಅನುದಾನ ನೀಡಿರುತ್ತಾರೆ.

ಅ.23 ರಿಂದ 25 ರವರೆಗೆ ಮೂರುದಿನಗಳ ಕಾಲ ಚನ್ನಮ್ಮನ ಕಿತ್ತೂರಿನಲ್ಲಿ ಅದ್ಧೂರಿ ಉತ್ಸವ ನಡೆಯಲಿದೆ. ಇದಕ್ಜೆ ಸಂಬಂಧಿಸಿದಂತೆ ಅಲ್ಲಿನ ಶಾಸಕರ ನೇತೃತ್ವದಲ್ಲಿ ಎಲ್ಲ ಸಿದ್ಧತೆಗಳು ನಡೆದಿವೆ ಎಂದು ಶಾಸಕ ಅನಿಲ್ ಬೆನಕೆ ತಿಳಿಸಿದರು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ