Breaking News

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

Spread the love

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ*

ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.

ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು.

ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ ಮೇರವಣಿಗೆಯಲ್ಲಿ ಪಾಲ್ಗೊಂಡಿದ್ದರು.ಒಂದು ರೀತಿಯಲ್ಲಿ ಜಾತ್ರಾ ವಾತಾವರಣವೆ ಸೃಷ್ಟಿಯಾಗಿತ್ತು.

ಇ ಸಂದರ್ಭದಲ್ಲಿ ಶ್ರೀ ಸಿದ್ದಯ್ಯ ಸ್ವಾಮೀಜಿ ಹಿರೇನಂದಿ, ಶ್ರೀಹರಿ ಜೋಶಿ ಗೋಕಾಕ್, ಶ್ರೀ ಗದಗಯ್ಯ ಸ್ವಾಮೀಜಿ ಉರಬಿನಟ್ಟಿ, ಅಧಿಕ ರಾವ್ ಪಾಟೀಲ್, ಪ್ರಶಾಂತ್ ಪಾಟೀಲ್ ಮತ್ತು ಊರಿನ ಹಿರಿಯರು, ರೈತ ಬಾಂದವರು ಹಾಗೂ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಾರ್ಮಿಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ

Spread the love ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ