Breaking News

ಮಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಡಿಡಿಪಿಐಗೆ ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

Spread the love

ಳವಳ್ಳಿ: ಟ್ಯೂಷನ್​ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್‌ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ.

 

ಟ್ಯೂಷನ್​​ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ‌ ಮೇಲ್ವಿಚಾರಕನಿಂದಲೇ ಅತ್ಯಾಚಾರ ನಡೆದಿತ್ತು. ಅಲ್ಲದೆ, ಆಕೆಯನ್ನು ಕೊಲೆ ಮಾಡಿ, ನೀರಿನ ಸಂಪ್​ ಒಳಗೆ ಹಾಕಿ, ಆರೋಪಿ ವಿಕೃತಿ ಮೆರದಿದ್ದ. ಈ ಘಟನೆಯನ್ನು ಇಡೀ ಕರ್ನಾಟಕದ ಜನತೆ ಖಂಡಿಸುವ ಮೂಲಕ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ಘಟನೆ ಬೆನ್ನಲ್ಲೇ ಡಿಡಿಪಿಐಗೆ ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್‌ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ. ಅನುಮತಿ ಪಡೆಯದೆ ಟ್ಯೂಷನ್ ನಡೆಸಿದರೆ ಪ್ರಕರಣ ದಾಖಲಾಗುತ್ತದೆ ಎಂದು ಮಂಡ್ಯದಲ್ಲಿ ಡಿಡಿಪಿಐ ಜವರೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ