Home / ರಾಜಕೀಯ / ಅರುಣ್ ಸಿಂಗ್ ವಿರುದ್ಧ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗರಂ..!

ಅರುಣ್ ಸಿಂಗ್ ವಿರುದ್ಧ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗರಂ..!

Spread the love

ಅರುಣ್ ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ತಿಳಿದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಕಾರ್ಯಕರ್ತರು ನಾಯಕರು ಎಂದು ಹೇಳುತ್ತಾರೆ. ಆದರೆ ಅರುಣ ಸಿಂಗ್ ಅವರು ಯಾವುದೇ ಕಾರಣಕ್ಕೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಹಗುರವಾಗಿ ಮಾತನಾಡದಂತೆ ತಾಕೀತು ಮಾಡಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಯತ್ನಾಳ ನಮ್ಮ ನಾಯಕನಲ್ಲ ಎಂಬ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರ್ನಾಟಕದ ಜನರಿಗೆ ಬಸನಗೌಡ ಪಾಟೀಲ ಯತ್ನಾಳ ಅವರು ನಾಯಕರಲ್ಲ ಎಂದು ಅರಣ್ ಸಿಂಗ್ ಹೇಳಿರುವುದು ನಮ್ಮ ಸಮಯದಾಯದವರಿಗೆ ನೋವು ಉಂಟಾಗಿದೆ. ಹುಕ್ಕೇರಿಯಲ್ಲಿ ನಡೆಯುವ ಪಂಚಮಸಾಲಿ ಸಮಾವೇಶದಲ್ಲಿ ಇದಕ್ಕೆ ಉತ್ತರ ಕೊಡಲಿದ್ದೇವೆ. ಅರುಣ್ ಸಿಂಗ್ ಅವರು ಯತ್ನಾಳ ಸೇರಿದಂತೆ ಪಂಚಮಸಾಲಿ ಸಮಾಜದ ನಾಯಕರಿಗೆ ಅವಮಾನಕರ ಹೇಳಿಕೆ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಸೂಚನೆ ನೀಡಬೇಕೆಂದು ಆಗ್ರಹಿಸಿದರು.

ಪಂಚಮಸಾಲಿ ಸುಮುದಾಯಕ್ಕೆ 2ಎ ಮೀಸಲಾತಿ ‌ನೀಡಬೇಕೆಂದು ಆಗ್ರಹಿಸಿ ಇದೇ ಅಕ್ಟೋಬರ್ 21ರಂದು ರಾಜ್ಯ ಮಟ್ಟದ ಲಿಂಗಾಯತ ಪಂಚಮಸಾಲಿಯ ಬೃಹತ್ ಸಮಾವೇಶ ಹುಕ್ಕೇರಿಯಲ್ಲಿ ಆಯೋಜಿಸಲಾಗಿದೆ. ಹುಕ್ಕೇರಿಯಲ್ಲಿ ನಡೆಯುವ ಪಂಚಮಸಾಲಿ ಸಮಾವೇಶದಲ್ಲಿ ಮೀಸಲಾತಿ ನೀಡದ ಸರಕಾರದ ವಿರುದ್ಧ ಹೋರಾಟದ ರೂಪರೇಷೆಗಳನ್ನು ಸಿದ್ಧ ಪಡಿಸುವ ನಿರ್ಣಯ ತೆಗೆದುಕೊಳ್ಳಲಾಗುವುದು. ವಿಧಾನ ಸೌಧದ ಮುಂಭಾಗದಲ್ಲಿ 25 ಲಕ್ಷ ಪಂಚಮಸಾಲಿ ಸಮಾಜದವರು ಆಗಮಿಸಿ ಸರಕಾರಕ್ಕೆ ಒತ್ತಡ ಹಾಕುವ ಪ್ರಯತ್ನ ಮಾಡಿ ಶಕ್ತಿ ಪ್ರದರ್ಶನ ಮಾಡುವ ಅನಿವಾರ್ಯತೆ ಇದೆ ಎಂದರು


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ