ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ವೀಕೆಂಡ್ ರಜೆ ಸೇರಿದಂತೆ ನರಕ ಚತುರ್ದಶಿ, ಅಮಾವಾಸ್ಯೆ, ಬಲಿಪಾಡ್ಯಮಿ ಹೀಗೆ ಸಾಲು ಸಾಲು ರಜೆಯ ಸಂದರ್ಭದಲ್ಲಿ ಊರಿಗೆ ಹೋಗುವವರು ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ.
ಹೀಗಾಗಿ ಕೆಎಸ್‌ಆರ್ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ.
ಅ. 21 ರಿಂದ 23ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಮತ್ತು ಹೊರ ರಾಜ್ಯಗಳ ನಾನಾ ಸ್ಥಳಗಳಿಗೆ ಹೆಚ್ಚುವರಿಯಾಗಿ 1,500 ವಿಶೇಷ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಅ. 26 ರಿಂದ 30ರವರೆಗೆ ನಾನಾ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳು ಮರಳುತ್ತವೆ.
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಶಿವಮೊಗ್ಗ, ಹಾಸನ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ ಕ್ಕೆ ಬಸ್ ಸಂಚರಿಸಲಿವೆ.