ಮೈಸೂರು: 2023ರ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಸಿದ್ಧತೆ ಆರಂಭಿಸಿದ್ದರೆ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಮತದಾರರ ಓಲೈಕೆಗೆ ಮುಂದಾಗಿದೆ. ಈ ನಡುವೆ ಜೆಡಿಎಸ್, ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನೇ ಅಂತಿಮಗೊಳಿಸುವ ಮೂಲಕ ಭರ್ಜರಿ ತಯಾರಿ ನಡೆಸಿದೆ.
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಸಭೆ ನಡೆದಿದ್ದು, ಸಭೆಯಲ್ಲಿ ವಿಧಾನಸಭಾ ಚುನಾವಣೆಗೆ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ ನಡೆದಿದೆ.
126 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಪಕ್ಷ ಸಂಘಟನೆ ಸೇರಿದಂತೆ ಸಕ್ರಿಯವಾಗಿ ಕೆಲಸ ಮಾಡಿದವರಿಗೆ ಮಾತ್ರ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಕ್ರಮದ ದಿನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
Laxmi News 24×7