ಬೆಂಗಳೂರು : 2023-24ನೇ ಸಾಲಿನಿಂದ ಹೊಸದಾಗಿ ಖಾಸಗಿ ಶಾಲೆಗಳನ್ನು ಆರಂಭಿಸಲು ಇಚ್ಚಿಸುವ ಶಿಕ್ಷಣ ಸಂಸ್ಥೆಗಳು ಡಿ.15ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳನ್ನು ಆರಂಭಿಸಲು ನೋಂದಣಿ ಬಯಸುವ ಸಂಸ್ಥೆಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿಗದಿಪಡಿಸಿದ ಮಾನದಂಡಗಳನ್ನು ಅನುಸರಿಸಬೇಕು. ನ.4ರಿಂದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಆಯಕ್ತರು ತಿಳಿಸಿದ್ದಾರೆ.